ಪುತ್ತೂರಿನಲ್ಲಿ ಗಾಂಧೀಜಿ ಪ್ರತಿಮೆಗೆ ಅವಮಾನ

Gandhikatte Puttur
Published on

ಪುತ್ತೂರು: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಐತಿಹಾಸಿಕ ಗಾಂಧಿ ಕಟ್ಟೆಯಲ್ಲಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿರುವುದು ಗುರುವಾರ ಬೆಳಕಿಗೆ ಬಂದಿದೆ.

ಬುಧವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆ ಮೇಲಿರಿಸಿ, ಪ್ರತಿಮೆಯ ತಲೆಗೆ ಟೀ ಶರ್ಟ್ ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಗಾಂಧಿಕಟ್ಟೆ ಸಮಿತಿಯು ಪುತ್ತೂರು ನಗರ ಠಾಣೆಗೆ ದೂರು ನೀಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈಎಸ್‌ಪಿ ಡಾ.ಗಾನ ಪಿ.ಕುಮಾರ್ ಮತ್ತು ಪುತ್ತೂರು ನಗರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net