ಬೈಕ್ ಕಳವು ಮಾಡಿದ್ದ ಆರೋಪಿ ಬಂಧನ

bike theft arrest
ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಜಪ್ತಿ ಮಾಡಿದ ಬೈಕ್‌ಗಳು.
Published on

ಶಿವಮೊಗ್ಗ: ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಅನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತ ಭದ್ರಾವತಿ ಮತ್ತು ಚನ್ನಗಿರಿ ಭಾಗದಲ್ಲಿ ಕಳವು ಮಾಡಿದ್ದ ನಾಲ್ಕು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಭದ್ರಾವತಿ ತಾಲೂಕಿನ ದಾನವಾಡಿ ಗ್ರಾಮದ ಉಮೇಶ್ (41) ಬಂಧಿತ ಆರೋಪಿ. ಈತ ಕಳೆದ ಜೂ.2ರಂದು ಚನ್ನಗಿರಿಯ ಗಂಗಾಧರಪ್ಪ ಎಂಬುವರು ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಅನ್ನು ಕಳವು ಮಾಡಿದ್ದ. ಈ ಬಗ್ಗೆ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭದ್ರಾವತಿ ಎಎಸ್ಪಿ ಜಿತೇಂದ್ರಕುಮಾರ್ ದಯಾಮ ಮತ್ತು ಭದ್ರಾವತಿ ನಗರ ಸಿಪಿಐ ರಾಘವೇಂದ್ರ ಕಾಂಡಿಕೆ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಠಾಣೆ ಪಿಎಸ್‌ಐಗಳಾದ ಟಿ.ರಮೇಶ್, ಭಾರತಿ ನೇತೃತ್ವದ ಎಎಸ್‌ಐ ವೆಂಕಟೇಶ್, ಸಿಬ್ಬಂದಿಗಳಾದ ರಂಗನಾಥ, ತೀರ್ಥಲಿಂಗಪ್ಪ, ಪ್ರವೀಣ್‌ಕುಮಾರ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಈತ ಭದ್ರಾವತಿ ನ್ಯೂಟೌನ್ ಠಾಣೆ ವ್ಯಾಪ್ತಿಯಲ್ಲಿ ಮೂರು ಮತ್ತು ಚನ್ನಗಿರಿ ಠಾಣಾ ವ್ಯಾಪ್ತಿಯಲ್ಲಿ ಒಂದು ಬೈಕ್ ಅನ್ನು ಕಳವು ಮಾಡಿರುವುದನ್ನು ಪತ್ತೆ ಮಾಡಿದ್ದು 1.25 ಲಕ್ಷ ರೂ. ಮೌಲ್ಯದ ನಾಲ್ಕು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net