ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ

03 NMG 01
ನಾಗಮಂಗಲ ತಾಲೂಕಿನ ವರಾಹಸಂದ್ರ ಗ್ರಾಮದ ಮನೆಯಲ್ಲಿ ದೋಚಿದ್ದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published on

ನಾಗಮಂಗಲ: ಮನೆಯ ಮೇಲಿನ ಹೆಂಚುಗಳನ್ನು ತೆಗೆದು ಬೀರುವಿನಲ್ಲಿದ್ದ 9.35 ಲಕ್ಷ ರೂ. ಮೌಲ್ಯದ 170 ಗ್ರಾಂ ಚಿನ್ನದ ಒಡವೆಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳೂರು ಠಾಣೆಯ ಪೊಲೀಸರು ಇತ್ತೀಚೆಗೆ ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರ್ ಮೂಲದ ಶಂಕರ್ ಮುಖಿಯಾ(23) ಬಂಧಿತ ಆರೋಪಿ. ತಾಲೂಕಿನ ಬೆಳ್ಳೂರು ಹೋಬಳಿಯ ವರಾಹಸಂದ್ರ ಗ್ರಾಮದ ಪ್ರಮೀಳಾ ಮತ್ತು ಸತೀಶ್ ದಂಪತಿಯ ಮನೆಯಲ್ಲಿ ಶಂಕರ್ ಮುಖಿಯಾ ಕೂಲಿ ಕೆಲಸ ಮಾಡಿಕೊಂಡಿದ್ದನು. ಸತೀಶ್‌ಗೆ ಆರೋಗ್ಯ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಚುಗಳನ್ನು ತೆಗೆದು ಬೀರುವಿನಲ್ಲಿದ್ದ 9.35 ಲಕ್ಷ ರೂ. ಮೌಲ್ಯದ 170 ಗ್ರಾಂ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿದ್ದನು. ಸತೀಶ್ ಪತ್ನಿ ಪ್ರಮೀಳಾ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ಪತ್ತೆಗೆ ಡಿವೈಎಸ್‌ಪಿ ಎ.ಆರ್.ಸುಮಿತ್ ಮತ್ತು ವೃತ್ತ ನಿರೀಕ್ಷಕ ಬಿ.ಆರ್.ಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿ ಶಂಕರ್ ಮುಖಿಯಾನನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ಳೂರು ಠಾಣೆಯ ಪಿಎಸ್‌ಐ ಬಸವರಾಜ ಚಿಂಚೋಳಿ, ಅಪರಾಧ ವಿಭಾಗದ ಪಿಎಸ್‌ಐ ಪುನೀತ್, ಸಿಬ್ಬಂದಿ ಕೆ.ವಿ.ಪ್ರಶಾಂತ್‌ಕುಮಾರ್, ಬಿ.ಕೆ.ಕಿರಣ್‌ಕುಮಾರ್, ಶಂಕರನಾಯ್ಕ, ರವಿಕಿರಣ್ ಮತ್ತು ಲೋಕೇಶ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net