ಕಳವು ಆರೋಪಿ ಸೆರೆ

FotoJet (3)
Published on

ಕುದೂರು: ಕುದೂರು ಠಾಣಾ ವ್ಯಾಪ್ತಿಯ ಸೋಲೂರು ಹೋಬಳಿಯ ಉಡುಕುಂಟೆ ಗ್ರಾಮದಲ್ಲಿ ಇತ್ತೀಚೆಗೆ ಕುಡಿಯಲು ನೀರು ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಪ್ರಶಾಂತ್ ಬಂಧಿತ. ಆರೋಪಿಯಿಂದ ₹2.30 ಲಕ್ಷ ಮೌಲ್ಯದ 38 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಕುದೂರು ಇನ್‌ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net