15 ವರ್ಷದಿಂದ ತಲೆಮರೆಕೊಂಡಿದ್ದ ಆರೋಪಿ ಬಂಧನ

29sirsi2 crime
Published on

ಶಿರಸಿ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಜಯಪುರದ ಸಂಜಯ್ ಎಂ. ಗಜಕೋಶ ಬಂಧಿತ ಆರೋಪಿ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ವಿರುದ್ಧ ವಾರೆಂಟ್ ಹೊರಡಿಸಿತ್ತು. ಪತ್ತೆಗೆ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ವಿಜಯಪುರ ಜಿಲ್ಲೆಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net