ಎಸಿಬಿ ಬಲೆಗೆ ಬಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರು ಅಧಿಕಾರಿಗಳು

UDP- ACB ride
Published on

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ವಾಣಿಜ್ಯ ಉದ್ದೇಶಕ್ಕೆ ಪರವಾನಗಿ ನೀಡಲು 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ಮತ್ತು ಗ್ರಾಮೀಣ ಯೋಜನೆ ಸಹಾಯಕ ನಿರ್ದೇಶಕ ಗುರುಪ್ರಸಾದ್, ಅಧಿಕಾರಿಗಳಾದ ಪ್ರಸಾದ್, ನಯಿಮಾ ಸಯೀದ್ ಬಂಧಿತರು. ಪ್ರಾಧಿಕಾರದ ವ್ಯಾಪ್ತಿಯಲ್ಲಿ 77 ಸೆಂಟ್ಸ್ ವಸತಿ ಜಾಗವನ್ನು ವಾಣಿಜ್ಯ ಪ್ರದೇಶವಾಗಿ ಭೂ ಪರಿವರ್ತನೆ ಮಾಡಲು ಅಧಿಕಾರಿಗಳು 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಎಸಿಬಿಗೆ ಮಾಹಿತಿ ನೀಡಿದ್ದು, 2.5 ಲಕ್ಷ ರೂ. ಹಣ ಪಾವತಿ ಮಾಡುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಎಸ್‌ಪಿ ಸೈಮನ್, ಡಿವೈಎಸ್‌ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ನಡೆದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net