ಮೈಸೂರಿನಲ್ಲಿ ಮರ ಹನನಕ್ಕೆ ಎಸಿಎಫ್ ಅನುಮತಿ : ಪರಿಸರವಾದಿಗಳಿಂದ ಪ್ರತಿಭಟನೆ

ACF permits tree felling in Mysore Environmentalists protest
Published on

ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರ ವರ್ಗಾವಣೆಗೆ ಆಗ್ರಹಿಸಿ ಅರಣ್ಯ ಭವನದ ಮುಂಭಾಗ ಪರಿಸರ ಸಂರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದಲ್ಲಿ ಹಲವಾರು ವರ್ಷಗಳ ಹಿಂದೆ ನೆಟ್ಟು ಬೆಳೆಸಿದ ಸಾಲು ಮರಗಳ ಹನನಕ್ಕೆ ರವೀಂದ್ರ ಅನುಮತಿ ನೀಡುವ ಮೂಲಕ ನಗರದ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಲು ಅನುಮತಿ ನೀಡಬೇಕಾದರೆ ಸಾರ್ವಜನಿಕರ ಸಭೆ ಕರೆದು ಅಭಿಪ್ರಾಯ ಪಡೆಯಬೇಕು. ಸಭೆ ನಡೆಸಿದರೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತದೆ ಎಂಬ ಕಾರಣಕ್ಕೆ ಈ ಅಧಿಕಾರಿ ಎಲ್ಲ ಪ್ರದೇಶಗಲ್ಲಿ 40 ಮರಗಳ ಹನನಕ್ಕೆ ಅನುಮತಿ ನೀಡಿದ್ದಾರೆ. ನಗರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. ಕಡಿದ ಮರದ ಜಾಗದಲ್ಲಿ ಅರಣ್ಯ ಇಲಾಖೆ ಹೊಸದಾಗಿ ಸಸಿಗಳನ್ನು ನೆಡಲು ಸಹ ಆಸಕ್ತಿ ತೋರುತ್ತಿಲ್ಲ ಎಂದು ಆಕ್ರೋಶ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿ ಅಧ್ಯಕ್ಷೆ ಭಾನು ಮೋಹನ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net