ನಿರಂತರ ಅಧ್ಯಯನವಿದ್ದರೆ ಸಾಧನೆ

ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಏರ್ಪಡಿಸಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಉದ್ಘಾಟಿಸಿದರು. ಕೃಷ್ಣೇಗೌಡ, ಚಂದ್ರಕಾಂತ್, ಮಾರೇಗೌಡ, ಬಸವರಾಜು ಇತರರಿದ್ದರು.
ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಏರ್ಪಡಿಸಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಉದ್ಘಾಟಿಸಿದರು. ಕೃಷ್ಣೇಗೌಡ, ಚಂದ್ರಕಾಂತ್, ಮಾರೇಗೌಡ, ಬಸವರಾಜು ಇತರರಿದ್ದರು.
Published on

ಅರಕಲಗೂಡು: ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆ ಮೈಗೂಡಿಸಿಕೊಂಡು ನಿರಂತರ ಅಧ್ಯಯದಲ್ಲಿ ತೊಡಗಿದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಸಲಹೆ ನೀಡಿದರು.

ತಾಲೂಕಿನ ರಾಮನಾಥಪುರ ವಿದ್ಯಾನಿಕೇತನ ಶಾಲೆಯಲ್ಲಿ ಶ್ರೀ ಅರಸೀಕಟ್ಟೆ ಅಮ್ಮ ದೇವಾಲಯ ಸಮಿತಿ ಹಾಗೂ ಬೆಂಗಳೂರು ಅಮೋಘವರ್ಷ ಐಎಎಸ್, ಕೆಎಎಸ್ ಅಕಾಡೆಮಿ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ನಗರ ಪ್ರದೇಶಗಳಲ್ಲಿ ತರಬೇತಿ ಇತರೆ ಸೌಲಭ್ಯಗಳು ಬಹುಬೇಗ ದೊರೆಯುತ್ತದೆ. ಆದರೆ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಭೆಗಳು ಇದ್ದರೂ ಅವಕಾಶಗಳಿಂದ ವಂಚಿತರಾಗುವಂತಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತರಬೇತಿ ಕಾರ್ಯ ರೂಪಿಸಲಾಗಿದೆ ಎಂದು ಹೇಳಿದರು.

ಶೈಕ್ಷಣಿಕವಾಗಿ ನಾವು ಮೌಲ್ಯಗಳನ್ನು ಕಡೆಗಣಿಸುತ್ತಿದ್ದು, ವ್ಯಾವಹಾರಿಕ ಜೀವನದತ್ತ ಹೊರಳುತ್ತಿರುವ ಪರಿಣಾಮ ಸಮಾಜದಲ್ಲಿ ಸಂಸ್ಕಾರಗಳು ಕಡಿಮೆಯಾಗುತ್ತಿವೆ. ಶಿಕ್ಷಣದಿಂದ ಸಾಮಾಜಿಕ ಅರ್ಥಿಕ ಅಭಿವೃದ್ಧ್ದಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶ್ರೀ ಅರಸಿಕಟ್ಟೆಯಮ್ಮ ದೇವಸ್ಥಾನ ಸಮಿತಿಯ ಸಾಮಾಜಿಕ ಕಳಕಳಿಯ ಸೇವಾ ಕಾರ್ಯಕ್ಕೆ ಎಲ್ಲರ ಸಹಕಾರ ಸದಾ ಇರಲಿ ಎಂದು ಮನವಿ ಮಾಡಿದರು.

ಶ್ರೀ ಅರಸೀಕಟ್ಟೆ ಅಮ್ಮ ದೇವಸ್ಥಾನದ ಪರಿಸರ ಶುಚಿತ್ವ ಇಲ್ಲದೆ ದುಸ್ಥಿತಿಯಲ್ಲಿತ್ತು. ಈಗ ಸಮಿತಿ ವತಿಯಿಂದ ದೇವಸ್ಥಾನದ ಅವರಣದಲ್ಲಿ ಉತ್ತಮ ಪರಿಸರ ರೂಪಿಸಿ ಭಕ್ತರಿಗೆ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಚಂದ್ರಕಾಂತ್, ಮಾರೇಗೌಡ, ಸೈಯದ್, ಬಸವರಾಜು, ಶ್ರೀ ವಿದ್ಯಾನಿಕೇತನ ಸಂಸ್ಥೆಯ ಸಂಚಾಲಕ ವಿರೂಪಾಕ್ಷ, ಶ್ರೀ ಅರಸೀಕಟ್ಟೆ ಅಮ್ಮ ದೇವಾಲಯ ಸಮಿತಿ ಕಾರ್ಯದರ್ಶಿ ಮಾದಾಪುರ ಕೃಷ್ಣೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net