ವಿಭಾಗ ಮಟ್ಟಕ್ಕೆ ನಿನಾದ ಶಾಲೆಯ ವಿದ್ಯಾರ್ಥಿಗಳು

21 gkp 09
ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿನಾದ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ಗೋಣಿಕೊಪ್ಪ: ಮಡಿಕೇರಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ನಿನಾದ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ಬಾಲಕರ ತಂಡದ ರಾಹಿಲ್, ಪ್ರಶಾಂತ್, ರಮೀಜ್ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡದ ತಶ್ಫಿಯಾ, ಗಾಯನ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ವಿದ್ಯಾರ್ಥಿಗಳಿಗೆ ತರಬೇತುದಾರ ಎಚ್.ಎಚ್.ಆದರ್ಶ್ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net