

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಪ್ರಿಯದರ್ಶಿನಿ ಕಾಲನಿಯಲ್ಲಿರುವ ಡಾ. ಆರ್.ಬಿ. ಪಾಟೀಲ ಮಹೇಶ ಪಪೂ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಥಳೀಯ ಐಬಿಎಂಆರ್ ಸಂಸ್ಥೆಯು ಸಂಘಟಿಸಿದ ಅಶ್ವಮೇಧ-ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಯಶಸ್ವಿಯಾಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪಾಶ್ಚಿಮಾತ್ಯ ನೃತ್ಯ ಸ್ಪರ್ಧೆಯಲ್ಲಿ ಸಮೃದ್ಧಿ ಕಲ್ಮನೆ, ಸಾಯಿ ಶ್ರುತವತಿ, ಕೃಷ್ಣಾ ಕಲಬುರ್ಗಿ, ಆಯುಷ್ ಎಸ್., ಆಕಾಶ ಎ. ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಸಾಯಿ ಶ್ರುತವತಿ ದ್ವಿತೀಯ ಗಳಿಸಿದ್ದಾರೆ. ವಿದ್ಯಾರ್ಥಿನಿ ಮನಸ್ವಿ ಎಸ್. ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಇಂಗ್ಲಿಷ ವಿಭಾಗದ ಮುಖ್ಯಸ್ಥ ನೀಲ್ ಪ್ರತಾಪನ್, ಉಪನ್ಯಾಸಕಿ ಶಿಬಾನಿ ಜಿ.ಕೆ. ಮತ್ತು ಮಮತಾ ಮಂಗಳೂರಮಠ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದರು.