ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ

KLS College Sports Champions
Published on

ಹಳಿಯಾಳ: ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹಳಿಯಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕೆಎಲ್​ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಡಾ. ಎಸ್. ಎಂ. ಗಲಗಲಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಬಾಲಕರ ತಂಡ ಕಬ್ಬಡಿ, ಫುಟ್ಬಾಲ್, ಚೆಸ್ ಹಾಗೂ ಟೆಬಲ್ ಟೆನಿಸ್ ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ತಂಡ ಚೆಸ್, ಟೆಬಲ್ ಟೆನಿಸ್​ನಲ್ಲಿ ಪ್ರಥಮ ಹಾಗೂ ಕಬ್ಬಡಿ, ಥ್ರೋಬಾಲ್ ನಲ್ಲಿ ದ್ವೀತಿಯ ಸ್ಥಾನ ಪಡೆದಿದೆ.

ವೈಯಕ್ತಿಕ ವಿಭಾಗದಲ್ಲಿ ರಾಜು ಬೇಣಚೇಕರ ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಹ್ಯಾಮರ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕಿನ ವೈಯಕ್ತಿಕ ವೀರಾಗ್ರಣಿ ಪಡೆದುಕೊಂಡಿದ್ದಾನೆ.

ಸಾಯಿನಾಥ ಕಾಳೆ ಎತ್ತರ ಜಿಗಿತದಲ್ಲಿ ಪ್ರಥಮ, ನಾಗರಾಜ ರಾಹುತ್ 5000 ಮೀ. ಹಾಗೂ ಗುಡ್ಡಗಾಡು ಓಟದಲ್ಲಿ ದ್ವಿತೀಯ ಹಾಗೂ ಪ್ರಜ್ವಲಿ ಸಿದ್ದಿ 100 ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net