

ಸಿದ್ದಾಪುರ: ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಿದ್ದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಭೂಮಿಕಾ ಹೆಗಡೆ ತಂಡದವರು ಡೊಳ್ಳುಕುಣಿತದಲ್ಲಿ ಪ್ರಥಮ ಹಾಗೂ ನವೀನ್ ಚೆನ್ನಯ್ಯ ಮಿಮಿಕ್ರಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿನಿಯರು ಕವಾಲಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮಾಡಿದ್ದಾರೆ.
ವಿಜೇತರಿಗೆ ಬಿಇಒ ಎಂ.ಎಚ್. ನಾಯ್ಕ ಹಾಗೂ ಪ್ರೌಢಶಾಲಾ ಮುಖ್ಯಾಧ್ಯಾಪಕ ರಾಜೇಂದ್ರ ಕಾಂಬಳೆ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಿದರು. ಶಿಕ್ಷಕಿಯರಾದ ಕವಿತಾ ಬಿ.ಎಸ್.ಹಾಗೂ ಸುಶ್ಮಿತಾ ನಾಯ್ಕ ಇದ್ದರು.