

ಮಂಡ್ಯ: ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ವಿಶೇಷಚೇತನ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಕೊಮ್ಮೇರಹಳ್ಳಿ ವಿಶ್ವಮಾನವ ಕನ್ನಡ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಆರ್.ಸಾನವಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈಕೆ ತಾಲೂಕಿನ ಕೀಲಾರ ಗ್ರಾಮದ ರಾಜೇಂದ್ರ ಎಂಬುವರ ಮಗಳು.
ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಮುಖ್ಯಶಿಕ್ಷಕ ಎಚ್.ಆರ್.ನಾಗರಾಜು, ದೈಹಿಕ ಶಿಕ್ಷಣ ಶಿಕ್ಷಕ ಜಯವರ್ಧನನಾಯಕ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.