ಸಿಕ್ಕ ಅವಕಾಶಗಳ ಸದ್ಬಳಕೆಯಿಂದ ಸಾಧನೆ ಸುಲಭ: ಬೆನೆಡಿಕ್ಟ್ ಸೆರಾ ಅಭಿಮತ

Mbd_Dhawala
Published on

ಮೂಡುಬಿದಿರೆ: ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಜೀವನ ರೂಪಿಸಬೇಕು. ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಕಲಿತ ವಿದ್ಯಾಸಂಸ್ಥೆಗೆ ತಮ್ಮ ಕೈಲಾದ ಸಹಾಯ ನೀಡಿ ಕೃತಜ್ಞತೆ ಸಲ್ಲಿಸಲು ಪ್ರಯತ್ನಿಸಬೇಕಿದೆ ಎಂದು ದುಬೈ ಪ್ರೀಮಿಯರ್ ಫುಡ್ಸ್ ಲಿಮಿಟೆಡ್‌ನ ಸಿಇಒ, ಕಾಲೇಜಿನ ಹಳೇ ವಿದ್ಯಾರ್ಥಿ ಬೆನೆಡಿಕ್ಟ್ ಸೆರಾ ಹೇಳಿದರು.

ಮೂಡುಬಿದಿರೆ ಶ್ರೀ ಧವಲಾ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಹಳೇ ವಿದ್ಯಾರ್ಥಿ, ಮೂಡುಬಿದಿರೆ ಲ್ಯಾಂಡ್ ಟ್ರಿಬ್ಯುನಲ್‌ನ ಸದಸ್ಯ ರಮೇಶ್ ಶೆಟ್ಟಿ ಮಾತನಾಡಿದರು. ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಹೇಮರಾಜ್ ಶುಭ ಹಾರೈಸಿದರು. ಕಾರ್ಯದರ್ಶಿ ಅಭಿಜಿತ್ ಎಂ. ಕಾಲೇಜಿನ ವಾರ್ಷಿಕ ಸಂಚಿಕೆ ಪ್ರತಿಬಿಂಬವನ್ನು ಅನಾವರಣಗೊಳಿಸಿದರು. ಕಾಲೇಜಿನ ಒಳಭಾಗದ ರಸ್ತೆ ನಿರ್ಮಾಣಕ್ಕೆ 3 ಲಕ್ಷ ರೂ. ನೀಡಿದ ಬೆನೆಡಿಕ್ಟ್ ಸೆರಾ ಅವರನ್ನು ಹಾಗೂ ರಸ್ತೆಯನ್ನು ಕ್ಲಪ್ಪ ಸಮಯದಲ್ಲಿ ನಿರ್ಮಿಸಿಕೊಟ್ಟಿರುವ ರಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಪ್ರೊ.ಪಾರ್ಶ್ವನಾಥ ಅಜ್ರಿ ಅಧ್ಯಕ್ಷತೆ ವಹಿಸಿ, ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕಿ ಡಾ.ರೂಪಾ ಇದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್ ಸ್ವಾಗತಿಸಿದರು. ಕಾರ್ಯದರ್ಶಿ ರಿತೀಶಾ ಹಾಗೂ ವಾಣಿಜ್ಯ ಸಂಘದ ಕಾರ್ಯದರ್ಶಿ ಶ್ರದ್ಧಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಇಶಾ ನಿರೂಪಿಸಿದರು. ಜತೆ ಕಾರ್ಯದರ್ಶಿ ಭೂಮಿಕಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net