ಕ್ಲಾಸಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

6 Dwd 3
Published on

ಧಾರವಾಡ: ನಗರದ ಕ್ಲಾಸಿಕ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಹುಬ್ಬಳ್ಳಿಯ ವೇದಾ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ಅಂತರ ಶಾಲಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ವೈಯಕ್ತಿಕ ವಿಭಾಗದಲ್ಲಿ ಟೇಬಲ್ ಟೆನಿಸ್, ಗುಂಡು ಎಸೆತ, ಕೇರಂ ಹಾಗೂ ಓಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಹಾಗೂ ಗುಂಪು ವಿಭಾಗದ ಕ್ರಿಕೆಟ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯ, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net