

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಎಂಜಿ.ಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತೋಷಿತ್ ಎಸ್.ಬಾಬು 50ಮೀ ಫ್ರೀ ಸ್ಟೈಲ್ ಹಾಗೂ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಪಿಯುಸಿ ಮನಸ್ವಿ 50 ಮೀ ಹಾಗೂ 100ಮೀ ಫ್ರೀ ಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ಜಗನ್ ಮೋಹನ್ ರೆಡ್ಡಿ 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 100ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.