ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ
Published on

ನಾಪೋಕ್ಲು: ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು 2024-25ನೇ ಸಾಲಿನ ಪ್ರಾಥಮಿಕ ಶಾಲಾ ವಿಭಾಗದ ಮೂರ್ನಾಡು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದಾರೆ.

ಬಾಲಕಿಯರ ವಾಲಿಬಾಲ್ ಹಾಗೂ ಖೋ ಖೋ ಪ್ರಥಮ, ಬಾಲಕರ ಖೋ ಖೋ ಪ್ರಥಮ, ಥ್ರೋ ಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೀಕ್ಷಿತಾ ಚೆಸ್‌ನಲ್ಲಿ ಸ್ಥಾನ ಪಡೆದಿದ್ದಾಳೆ. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ಮುಖ್ಯಶಿಕ್ಷಕಿ ಬಿ.ಎನ್. ಪುಷ್ಪವತಿ ತಿಳಿಸಿದ್ದಾರೆ. ದೈಹಿಕ ಶಿಕ್ಷಕ ಪ್ರೇಮಲತಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net