ಜೆಎಸ್‌ಎಸ್ ಹುಕ್ಕೇರಿಕರ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

16 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ಜೆಎಸ್‌ಎಸ್ ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ.

ಶಿಲ್ಪಾ ಹೊಸಮನಿ 800 ಮೀ. ಓಟದಲ್ಲಿ ಚಿನ್ನದಪದಕ, 400 ಮೀ. ಓಟದಲ್ಲಿ ಬೆಳ್ಳಿ ಪದಕ, 4*400 ಮೀ. ರಿಲೇಯಲ್ಲಿ ಬೆಳ್ಳಿ ಪದಕ, ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾಳೆ. 4*400 ಮೀ. ರಿಲೇಯಲ್ಲಿ ಸಾನಿಯಾ ಸಾಬ್, ಸುಪ್ರೀತಾ ಸಿದ್ದಿ, ಮುಸ್ಕಾನ್ ಮುಖೇರಿ ಬೆಳ್ಳಿ ಪದಕ ಪಡೆದಿದ್ದಾರೆ.

ವಿದ್ಯಾರ್ಥಿಗಳನ್ನು ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು. ಪ್ರಾಚಾರ್ಯೆ ಭಾರತಿ ಶಾನಭಾಗ, ಮಹಾವೀರ ಉಪಾದ್ಯೆ, ದೈಹಿಕ ಶಿಕ್ಷಣ ನಿರ್ದೇಶಕರಾದ ಜಿನ್ನಪ್ಪ ಕುಂದಗೊಳ, ಬಾಹುಬಲಿ ಚೌಗಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net