ಕುಚ್ಚೂರು ಶಾಲಾ ವಿದ್ಯಾರ್ಥಿಗಳ ಸಾಧನೆ

state level
ಹೆರ್ಗ ವಿಠಲಶೆಟ್ಟಿ ಪ್ರೌಢಶಾಲೆ ಕುಚ್ಚೂರಿನ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ಹೆಬ್ರಿ: ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆರ್ಗ ವಿಠಲಶೆಟ್ಟಿ ಪ್ರೌಢಶಾಲೆ ಕುಚ್ಚೂರಿನ ಐದು ವಿದ್ಯಾರ್ಥಿಗಳು ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾತ್ವಿಕ್ 110 ಮೀಟರ್ ಹರ್ಡಲ್ಸ್‌ನಲ್ಲಿ ಪ್ರಥಮ, ಪೋಲ್‌ವಾಲ್ಟ್‌ನಲ್ಲಿ ರಚನಾ ಹಾಗೂ ಸುರೇಶ್ ಪ್ರಥಮ, 3000 ಮೀಟರ್ ಓಟದಲ್ಲಿ ಅಕ್ಷಿತಾ ದ್ವಿತೀಯ ಹಾಗೂ ರಂಜಿತ್ 400 ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸ್‌ಡಿಎಂಸಿ ಅಧ್ಯಕ್ಷ ಹರ್ಷ ಶೆಟ್ಟಿ ಬೇಳಂಜೆ, ಮುಖ್ಯಶಿಕ್ಷಕಿ ಪ್ರಭಾವತಿ, ಎಸ್‌ಡಿಎಂಸಿ ಸದಸ್ಯ ಬಿ.ಕರುಣಾಕರ ಶೆಟ್ಟಿ, ತಂಡದ ವ್ಯವಸ್ಥಾಪಕ ಜಯರಾಮ್ ಶೆಟ್ಟಿ, ತುಳಸಿ, ದೈಹಿಕ ಶಿಕ್ಷಣ ಶಿಕ್ಷಕಿ ಕಮಲಿನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net