

ಹೆಬ್ರಿ: ಎಸ್.ಆರ್. ಕಾಲೇಜಿನ ವಿಜ್ಞಾನ ವಿಭಾಗದ ಚಿರಂತನ್ ಯು.ಎಸ್.588 ಅಂಕ ಪಡೆದು ಕಾಲೇಜಿಗೆ ಪ್ರಥಮ, ಅಭಿಜ್ಞಾ ಎನ್. 587 ದ್ವಿತೀಯ, ಚಿರಂತ್ ಎಂ.ಎ.580 ತೃತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 88 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅನನ್ಯಾ (585) ಪ್ರಥಮ, ಶೇಖರ್, ಶ್ರೀರಕ್ಷಾ (583)ದ್ವಿತೀಯ, ಶ್ರಾವ್ಯಾ (578) ತೃತೀಯ ಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ, ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ ಅಭಿನಂದಿಸಿದ್ದಾರೆ.