ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ

ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಪೋಕ್ಲು ವಲಯ ಮಟ್ಟದ  ಕ್ರೀಡಾಕೂಟದಲ್ಲಿ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ.
ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ.
Published on

ನಾಪೋಕ್ಲು: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ.

ಬಾಲಕರ ವಿಭಾಗದ ಹಾಕಿ ಪಂದ್ಯಾಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಬಾಲಕರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಚೆಸ್‌ನಲ್ಲಿ ಮಿಶ ಬಾ ಮತ್ತು ಸಿಂಚನಾ ಪೂವಯ್ಯ ತೃತೀಯ ಸ್ಥಾನ ಗಳಿಸಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಕಿರೀತ್ ಸೋಮಯ್ಯ 1500 ಮೀಟರ್‌ನಲ್ಲಿ ದ್ವಿತೀಯ, ಜಾವೆಲಿನ್ ಥ್ರೋನಲ್ಲಿ ಪ್ರಥಮ ಸ್ಥಾನ, ಟ್ರಿಪಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೇತನ್ ಕರುಂಬಯ್ಯ 3000 ಮೀ.ಓಟದ ಸ್ಪರ್ಧೆಯಲ್ಲಿ ಪ್ರಥಮ, 100 ಮೀಟರ್‌ನಲ್ಲಿ ದ್ವಿತೀಯ, ಹೈಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೆ.ಎ.ಆಕಾಶ್ 100 ಮೀಟರ್‌ನಲ್ಲಿ ಪ್ರಥಮ, 200 ಮೀಟರ್‌ನಲ್ಲಿ ಪ್ರಥಮ ,ಲಾಂಗ್ ಜಂಪ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಡಿ.ಪಿ.ಕೃಪಾ 200 ಮೀಟರ್‌ನಲ್ಲಿ ಪ್ರಥಮ, 400 ಮೀಟರ್‌ನಲ್ಲಿ ದ್ವಿತೀಯ, ಶಾಟ್‌ಪಟ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಿ.ಎಂ.ಗಾನವಿ 100 ಮೀಟರ್‌ನಲ್ಲಿ ಪ್ರಥಮ, ಲಾಂಗ್ ಜಂಪ್‌ನಲ್ಲಿ ಪ್ರಥಮ, ಟ್ರಿಪಲ್ ಜಂಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ .ಶ್ರೇಯಾ ಪೂವಮ್ಮ ಹೈ ಜಂಪ್‌ನಲ್ಲಿ ಪ್ರಥಮ ಸ್ಥಾನ ಪಡೆದರೆ, ಪಿ.ಎಂ.ದೇವಯ್ಯ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ತಂಡ 4.100 ಮೀ.ನಲ್ಲಿ ದ್ವಿತೀಯ ಸ್ಥಾನ ಪಡೆದರೆ, ಬಾಲಕಿಯರು 4.100 ಮೀಟರ್ ರಿಲೇನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪ್ರಥಮ ಸ್ಥಾನ ಗಳಿಸಿದ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲೆ ಬಿ.ಎಂ.ಶಾರದಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಕೆ ಸರಿತಾ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net