ಸರ್ವೋದಯ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ

27blrp4
ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳೊಂದಿಗೆ ಬೇಲೂರಿನ ಸರ್ವೋದಯ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರಕಾಶ್ ಹಾಗೂ ಶಿಕ್ಷಕರು ಇದ್ದರು.
Published on

ಬೇಲೂರು: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೇಲೂರಿನ ಸರ್ವೋದಯ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು 14 ಮತ್ತು 17 ವರ್ಷದ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷ ಪ್ರಕಾಶ್ ಹೇಳಿದ್ದಾರೆ.

ಹಾಸನದ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೇಲೂರಿನ ಸರ್ವೋದಯ ವಿದ್ಯಾಸಂಸ್ಥೆಯ ಹಿರಿಯ ಪಾಥಮಿಕ ಶಾಲೆ ವಿದ್ಯಾರ್ಥಿಗಳು 14 ವರ್ಷ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು 17 ವರ್ಷದ ಬಾಲಕರ ಹಾಗೂ ಬಾಲಕಿಯರ ವಿಭಾಗದ ಥ್ರೋಬಾಲ್‌ನಲ್ಲಿ ಒಂದೇ ಶಾಲೆಯ ಒಟ್ಟು 4 ತಂಡಗಳು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಬೇಲೂರಿಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net