ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ - ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

blg-17-2
ಬೀಳಗಿ ಸ್ವಾಮಿ ವಿವೇಕಾನಂದ ವಿಜ್ಞಾನ, ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ, ಶೈಕ್ಷಣಿಕ ಸಲಹೆಗಾರ ಆರ್.ಜಿ.ಕುಲಕರ್ಣಿ, ಆಡಳಿತಾಧಿಕಾರಿ ಶಂಕರಗೌಡ ಪಾಟೀಲ ಇದ್ದರು.
Published on

ಬೀಳಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ 2022-23ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೀಳಗಿ ಸ್ವಾಮಿ ವಿವೇಕಾನಂದ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ತಾಲೂಕು ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಪ್ರಥಮ, 1500 ಮೀ. ಓಟದಲ್ಲಿ ವಿನಾಯಕ ಶೆಲ್ಲಿಕೇರಿ ಮತ್ತು ಎತ್ತರ ಜಿಗಿತದಲ್ಲಿ ಬಾಲವ್ವ ಕರಡಿಗುಡ್ಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ, ಶೈಕ್ಷಣಿಕ ಸಲಹೆಗಾರ ಆರ್.ಜಿ.ಕುಲಕರ್ಣಿ, ಆಡಳಿತಾಧಿಕಾರಿ ಶಂಕರಗೌಡ ಪಾಟೀಲ ಹಾಗೂ ಪ್ರಾಚಾರ್ಯ ಜಿ.ಆರ್.ಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ ಆಲಗುಂಡಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net