

ತಿಕೋಟಾ: ಪಟ್ಟಣದ ಎ.ಬಿ. ಜತ್ತಿ ಪಿಯು ಕಾಲೇಜು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗದಲ್ಲಿ ಈರಯ್ಯ ಹಿರೇಮಠ 5000 ಮೀಟರ್ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಹಾಗೂ 5000 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ, ಸರಪಳಿ ಎಸೆತದಲ್ಲಿ ಚಂದ್ರಶೇಖರ ಭೋಸಲೆ ದ್ವೀತಿಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಬಶೀರಾ ಮುಜಾವರ ಉದ್ದು ಜಿಗಿತದಲ್ಲಿ ಪ್ರಥಮ ಸ್ಥಾನ, ಲಕ್ಷಿ$್ಮ ಮೀಸಾಳ ಸರಪಳಿ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ರೀಲೆಯಲ್ಲಿ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.