

ವಿಜಯಪುರ: ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು. ಸತತ ಅಧ್ಯಯನದಿಂದ ಸಾಧನೆ ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ (ಪ.ಪೂ. ಇಲಾಖೆ) ಉಪನಿರ್ದೇಶಕ ಡಾ. ಸಿ.ಕೆ. ಹೊಸಮನಿ ಹೇಳಿದರು.
ನಗರದ ಚೇತನಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಪಿಯು ಸೈನ್ಸ್ ಮತ್ತು ಕಾಮರ್ಸ್ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಶುಭ ಹಾರೈಕೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಚೇತನಾ ಪಿಯು ಸೈನ್ಸ್ ಕಾಲೇಜು ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇಲ್ಲಿ ಜ್ಞಾನಾರ್ಜನೆ ಮಾಡಿಕೊಂಡ ಹಲವು ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಆಯ್ಕೆಯ ಜತೆಗೆ ಸದ್ಯ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅವರ ಪ್ರೇರಣೆಯಾಗಿ ಪಡೆದು ನೀವುಗಳು ಸಹ ಉತ್ತಮ ಜ್ಞಾನ ಸಂಪಾದಿಸಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ.ಪೂ. ಶಿಕ್ಷಣ ಇಲಾಖೆ ಅಧಿಕಾರಿ ಪ್ರಕಾಶ ಗೊಂಗಡಿ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜತೆಗೆ ಉತ್ತಮ ಸಂಸ್ಕಾರ ಪಡೆಯಬೇಕು ಎಂದರು.
ಸಂಸ್ಥೆ ಅಧ್ಯಕ್ಷೆ ರಾಜಶ್ರೀ ಜುಗತಿ ಮಾತನಾಡಿ, ಮಕ್ಕಳಲ್ಲಿ ಶಿಸ್ತು ಮತ್ತು ಏಕಾಗ್ರತೆ ಇರಬೇಕು. ಗುರಿ ಸಾಧಿಸುವ ಛಲ ಇದ್ದರೆ ಸಾಧನೆ ಶತಸಿದ್ಧ ಎಂದು ಹೇಳಿದರು.
ಸಂಸ್ಥೆ ಉಪಾಧ್ಯಕ್ಷ ರೋಹಿತ ಜುಗತಿ, ಸ್ನೇಹಾ ಜುಗತಿ, ನಿರ್ದೇಶಕ ನಾಗರಾಜ ಹೇರಲಗಿ, ಸಹಾಯಕ ಆಡಳಿತಾಧಿಕಾರಿ ಪ್ರಮೋದ ಕುಲಕರ್ಣಿ, ಪ್ರಾಚಾರ್ಯ ವಿಶ್ವನಾಥ ದಾಬಡೆ, ಜಮೀಲ್ ಜಹಾಗಿರದಾರ, ಸದಾನಂದ ರೂಡಗಿ ಮತ್ತಿತರರಿದ್ದರು.