ಸ್ವಾತಂತ್ರೊೃೀತ್ಸವದಲ್ಲಿ ಸಾಧಕರಿಗೆ ಸನ್ಮಾನ

ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಲಸಾಗಿತ್ತು.
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಲಸಾಗಿತ್ತು.
Published on

ಹೊಳೆನರಸೀಪುರ: ಈ ಬಾರಿ ಸ್ವಾತಂತ್ರೊೃೀತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲೂಕು ಆಡಳಿತ, ಪುರಸಭೆ ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

ಬಾಲಕಿಯರ ಪದವಿಪೂರ್ವ ಕಾಲೇಜಿನ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಪೇಟೆ ಬೀದಿ, ಸುಭಾಷ್ ಸರ್ಕಲ್, ಅಂಬೇಡ್ಕರ್ ವೃತ್ತ, ಜಯಚಾಮರಾಜೇಂದ್ರ ಒಡೆಯರ್ ವೃತ್ತದ ಮೂಲಕ ಸಾಗಿ ಬಯಲು ರಂಗ ಮಂದಿರದಲ್ಲಿ ಅಂತ್ಯಗೊಳ್ಳಲಿದೆ ಎಂದು ಹೇಳಿದರು.

ಶಾಲಾ ಮಕ್ಕಳು, ಗೃಹರಕ್ಷಕ ದಳ ಸಿಬ್ಬಂದಿ, ರಕ್ಷಣಾ ಇಲಾಖೆಯಿಂದ ಪಥಸಂಚಲನ, ನೃತ್ಯ ಮತ್ತು ಕರಾಟೆ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘಟನೆಗಳ ಸದಸ್ಯರು, ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net