

ಸಿದ್ದಾಪುರ: ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವತಿಯಿಂದ ಅಮ್ಮತ್ತಿ ಗುಡ್ ಶೆಫರ್ಡ್ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದ್ದಾರೆ.
ಗೀತ ಗಾಯನ ಸ್ಪರ್ಧೆಯಲ್ಲಿ ಸ್ಕೌಟ್ಸ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರೆ ಗೈಡ್ಸ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗುಡ್ ಶೆಫರ್ಡ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕಿ ಸಿಸ್ಟರ್ ಎಲಿಜಬೆತ್ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಗೈಡ್ಸ್ ಶಿಕ್ಷಕಿ ಜಾಜಿ ಸೇರಿದಂತೆ ಮತ್ತಿತರರಿದ್ದರು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕಿ ರಾಜಮ್ಮ ಅಭಿನಂದಿಸಿದರು.