

ಕುಂದಾಪುರ: ಮಂಗಳೂರಿನ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆದ ವೈಜ್ಞಾನಿಕ ಮಾದರಿ ಸಂರಚನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ನೀರಿನ ತೇವಾಂಶ ಗುರುತಿಸುವ ಮಾದರಿಯನ್ನು ತಯಾರಿಸಿದ ಕೆ.ಪೃಥುಲ್, ಮೊಹಮ್ಮದ್ ವಾಸಿಲ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸೀನಿಯರ್ ವಿಭಾಗದ ಸ್ಪರ್ಧೆಯಲ್ಲಿ ನವೀನ ಕೃಷಿ ಮಾದರಿಯ ಪ್ರದರ್ಶನ ನಡೆಸಿದ ಚಿನ್ಮಯ್‌ದೀಕ್ಷಿತ್, ಅಮೋಘ ಎಂ.ಎಸ್. ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ, ಶಾಲಾ ಪ್ರಾಂಶುಪಾಲ ಶರಣ ಕುಮಾರರು ಪ್ರಶಂಶಿಸಿ ಶುಭ ಹಾರೈಸಿದರು.