

ವಿಜಯಪುರ : ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಕಾಲೇಜು ಹಂತವು ನಿರ್ಣಾಯಕ ಟ್ಟವಾಗಿದೆ. ವಿದ್ಯಾರ್ಥಿಗಳು ಅದನ್ನು ಅರಿತು ಸತತ ಪರಿಶ್ರಮದ ಮೂಲಕ ಜ್ಞಾನಾರ್ಜನೆ ಮಾಡುವ ಜತೆಗೆ ಜೀವನದಲ್ಲಿ ಯಶಸ್ಸಿನ ಉತ್ತುಂಗಕ್ಕೆ ತಲುಪಬೇಕು ಎಂದು ಪ್ರಾಚಾರ್ಯ ಹೇಮಂತ ಕೃಷ್ಣ ಶುಭ ಹಾರೈಸಿದರು. ತಾಲೂಕಿನ ಕವಲಗಿ ಗ್ರಾಮದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರಸ್ವತಿ ದೇವಿಗೆ ಪೂಜೆ ಸಲ್ಲಿಸುವ ಜತೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ನೂತನ ವಿದ್ಯಾರ್ಥಿಗಳಿಗೆ ವಿಷಯವಾರು ಮಾಹಿತಿ, ಕಾಲೇಜಿನ ನೀತಿ, ನಿಯಮ ಬಗ್ಗೆ ಮೂರು ಹಂತಗಳಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು.