ಮಾನವ ಹಕ್ಕು ಉಲ್ಲಂಘನೆ ಆಗದಂತೆ ಕಾರ್ಯನಿರ್ವಹಿಸಿ

9 Dwd 7
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆಯನ್ನು ತಡೆಯಬೇಕು. ಮಾನವ ಹಕ್ಕು ಉಲ್ಲಂಘನೆ ಆಗದಂತೆ ಅಽಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಽಕಾರಿಗಗಳ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಮಟ್ಟದಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದ ಆಯೋಗವು ಹೊಸ ಯೋಜನೆಯನ್ನು ರೂಪಿಸಿದೆ. ಪ್ರತಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವ ಉದ್ದೇಶ ಹೊಂದಿದೆ. ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ 46 ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿದ್ದು, 18 ಪ್ರಕರಣಗಳು ಜಿಲ್ಲಾ ಮಟ್ಟದಲ್ಲಿ ಬಾಕಿ ಇವೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಆಯೋಗದ ಹೆಸರು ಹೇಳಿ ಕೆಲವರು ದುರುಪಯೋಗ ಪಡೆಯುವ ಕುರಿತು ಆಯೋಗಕ್ಕೆ ದೂರುಗಳು ಬಂದಿವೆ. ಸುಳ್ಳು ದಾಖಲೆ ಇರುವ ಸಂಸ್ಥೆ ಮತ್ತು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಅಽಕಾರಿಗಳಿಗೆ ಸೂಚಿಸಿದರು.
ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಗೋಡಿ ಮಾತನಾಡಿ, ಆಯೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಬಸ್ ನಿಲ್ದಾಣ, ಜೈಲು, ಪೊಲೀಸ್ ಠಾಣೆ, ವಿದ್ಯಾರ್ಥಿ ನಿಲಯಗಳಲ್ಲಿ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ನಡೆಯುತ್ತದೆ. ಅಂತಹ ಸ್ಥಳಗಳಲ್ಲಿ ಅಽಕಾರಿಗಳು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾಽಕಾರಿ ದಿವ್ಯ ಪ್ರಭು, ಜಿ.ಪಂ. ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾAವಿ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net