ತಪ್ಪೆಸಗಿದ ಸಿಬ್ಬಂದಿ ವಿರುದ್ಧ ತಿಂಗಳೊಳಗೆ ಕ್ರಮ

07sunti01
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಕುರಿತು ಡಿಎಚ್‌ಒ ಸತೀಶ್ ಅವರಿಗೆ ಮಾಹಿತಿ ನೀಡುತ್ತಿರುವ ಎಸ್‌ಡಿಟಿಯು ಸಂಘಟನಾ ಕಾರ್ಯದರ್ಶಿ ಕೆ.ಎ.ಲತೀಫ್, ಜಿಲ್ಲಾಧ್ಯಕ್ಷ ಶರೀಫ್ (ಅಣ್ಣಾ), ಉದ್ಯಮಿ ಫೈರೋಜ್.
Published on

ಸುಂಟಿಕೊಪ್ಪ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ರೋಗಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಒಂದು ತಿಂಗಳ ಒಳಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ಭರವಸೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ರೋಗಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಎಸ್‌ಡಿಟಿಯು ಸಂಘಟನಾ ಕಾರ್ಯದರ್ಶಿ ಕೆ.ಎ.ಲತೀಫ್ ಆರೋಪಿಸಿದ್ದ ವರದಿ ವಿಜಯವಾಣಿಯಲ್ಲಿ ಕಳೆದ ಅ.23ರಂದು ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಡಿಎಚ್‌ಒ ಸತೀಶ್ ಅವರು ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿದರು.

ಈ ವೇಳೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ವಿವಿಧ ಸಂಘಟನೆಗಳ ಮುಖಂಡರು ಅವ್ಯವಸ್ಥೆ ಕುರಿತು ಡಿಎಚ್‌ಒ ಗಮನ ಸೆಳೆದರು. ಅಲ್ಲದೆ ಕೆಲ ಸಿಬ್ಬಂದಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ರೋಗಿಗಳೊಂದಿಗೆ ಅನುಚಿ ವರ್ತನೆ ತೋರುತ್ತಿದ್ದು, ಕೂಡಲೇ ಅವರನ್ನು ಇಲ್ಲಿಂದ ವರ್ಗಾವಣೆಗೊಳಿಸಬೇಕು. ಇವರ ಬದಲಿಗೆ ಬೇರೆ ಸಿಬ್ಬಂದಿ ನಿಯೋಜಿಸಬೇಕು ಎಂದು ಎಸ್‌ಡಿಟಿಯು ಮುಖಂಡರಾದ ಕೆ.ಎ.ಲತೀಫ್, ಶರೀಫ್ ಮತ್ತು ಉದ್ಯಮಿ ಫೈರೋಜ್ ಡಿಎಚ್‌ಒ ಅವರನ್ನು ಒತ್ತಾಯಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸತೀಶ್ ಅವರಿಗೆ ಬೇಡಿಕೆಯನ್ನು ಸಲ್ಲಿಸಿದ್ದರು. ಬೇಡಿಕೆಯನ್ನು ಈ

ಅಲ್ಲದೆ ಒಂದು ತಿಂಗಳ ಒಳಗೆ ಕ್ರಮಕೈಗೊಳ್ಳದಿದ್ದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಗ್ರಾಮಸ್ಥರ ಜತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಒಂದು ತಿಂಗಳ ಒಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net