ನಿರ್ಲಕ್ಷೃ ವಹಿಸುವವರ ವಿರುದ್ಧ ಕ್ರಮ

IMG_20230911_121355_1
Published on

ಹೊಳೆನರಸೀಪುರ: ರೈತರ ಕೆಲಸ ಕಾರ್ಯಗಳನ್ನು ಮಾಡಿಕೊಡದೆ ನಿರ್ಲಕ್ಷೃ ತಾಳುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅರಕಲಗೂಡು ಶಾಸಕ ಎ.ಮಂಜು ಎಚ್ಚರಿಸಿದರು.


ತಾಪಂ, ಜಿಪಂ ಸಹಯೋಗದೊಂದಿಗೆ ತಾಲೂಕಿನ ಹಳ್ಳಿಮೈಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಹಾಗೂ ಸರ್ಕಾರಿ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸರ್ಕಾರಿ ಕಚೇರಿಗೆ ರೈತರು ಬಂದ ವೇಳೆ ಅಧಿಕಾರಿಗಳು ಶಿಸ್ತಿನಿಂದ ನಡೆದುಕೊಳ್ಳಬೇಕು. ರೈತರನ್ನು ಕಡೆಗಣಿಸಿದರೆ ಮುಂದೊಂದು ದಿನ ಪಶ್ಚಾತಾಪಪಡಬೇಕಾಗುತ್ತದೆ. ರೈತರ ಪರ ಕಾಳಜಿ ಇಲ್ಲದ ಅಧಿಕಾರಿಗಳಿಗೆ ಕಾನೂನು ಕ್ರಮ ಜರುಗಿಸಿ ಪಾಠ ಕಲಿಸಬೇಕಾಗುತ್ತದೆ. ಕೆಲ ಅಧಿಕಾರಿಗಳು ರೈತರು ನೀಡಿದ ಅರ್ಜಿಗಳಿಗೆ ಉತ್ತರ ನೀಡದೆ ಸತಾಯಿಸುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಎ.ಮಂಜು, ಅಧಿಕಾರಿಗಳು ರೈತರಿಗೆ ವಿಮೆ ಮಾಡಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಹಾಗೂ ಅರಿವು ಮೂಡಿಸಬೇಕೆಂದು ತಿಳಿಸಿದರು.


ಸರ್ಕಾರಿ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಶಾಸಕರು ಪ್ರತಿಯೊಬ್ಬ ಅಧಿಕಾರಿಗಳನ್ನು ಪ್ರತ್ಯೇಕವಾಗಿ ತರಾಟೆಗೆ ತೆಗೆದುಕೊಂಡರು. ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ತಾ.ಪಂ. ಇಒ ಪಿ.ಆರ್.ಗೋಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net