

ವಿಜಯವಾಣಿ ಸುದ್ದಿಜಾಲ ಧಾರವಾಡ
ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಸಂಚಾರಿ ಠಾಣೆ ಪೊಲೀಸರು ಕ್ರಮ ಜರುಗಿಸಿ 2 ಬೈಕ್‌ಗಳನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ. ನಗರದ ಪ್ರಜ್ವಲ್ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಕೋಮಲ್ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಮಾಹಿತಿ ಬಂದ ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಎರಡೂ ಬೈಕ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.