ಮದ್ಯ ಸೇವಿಸಿದ್ದ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಮ

Published on

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಂದಿಬ್ಬರು ಸಿಬ್ಬಂದಿ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಮೇಲೆ ಮೇಲಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಎಸಗುವ ನೌಕರರ ವಿರುದ್ಧ ಕ್ರಮ ಕೈಗೊಂಡು ಶಿಸ್ತು ಮೂಡಿಸುವ ಕಾರ್ಯವನ್ನು ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಮತ್ತು ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ನಡೆಸಿದ್ದಾರೆ.

ಇತ್ತೀಚೆಗೆ ಖಾಸಗಿ ನೆಲೆಯಲ್ಲಿ ವಸತಿಗೃಹ ನೋಡಿಕೊಳ್ಳುವ ಜವಾಬ್ದಾರಿಯಲ್ಲಿದ್ದ ವ್ಯಕ್ತಿಯೊಬ್ಬರು ಮದ್ಯ ಸೇವಿಸಿ ಕರ್ತವ್ಯದಲ್ಲಿರುವುದನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದು ಪರಿಶೀಲಿಸಿದಾಗ ಕರ್ತವ್ಯದಲ್ಲಿದ್ದಾಗಲೇ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಆದ್ದರಿಂದ ಆತನನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮತ್ತೊಬ್ಬ ನೌಕರರಿಗೆ ನೋಟಿಸ್ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net