ವರುಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ: ಡಾ. ಯತೀಂದ್ರ ಸಿದ್ದರಾಮಯ್ಯ ಭರವಸೆ

30
Published on

ಮೈಸೂರು: ವರುಣ ಕ್ಷೇತ್ರದ ಎಲ್ಲ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರದ ಮಾಜಿ ಶಾಸಕ, ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವರುಣ ಕ್ಷೇತ್ರದ ಮೂಡಹಳ್ಳಿ, ಮಲ್ಲರಾಜಯ್ಯನಹುಂಡಿ, ಮಾದಯ್ಯನಹುಂಡಿ, ಹೊಸಕೋಟೆ, ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನರು ಹೆಚ್ಚು ಮತಗಳನ್ನು ಕೊಟ್ಟು ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಗಯಾಗಿದ್ದಾರೆ. ಎಲ್ಲ ಜನರ ಅನುಕೂಲಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುವಂತಹ ಬಜೆಟ್ ಮಂಡಿಸಿದ್ದಾರೆ ಎಂದರು.
ಗ್ರಾಮಗಳ ಅಭಿವೃದ್ಧಿಗೂ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಕಳೆದ 5 ವರ್ಷದಲ್ಲಿ ಬಿಜೆಪಿ ಸರ್ಕಾರ ವರುಣ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿರಲಿಲ್ಲ. ಆದ್ದರಿಂದ ಸಮಸ್ಯೆಗಳು ಹೆಚ್ಚಾಗಿವೆ. ನಿಗಮಗಳಿಂದ ಲೋನ್ ಕೇಳಿದ್ದೀರಿ. ರಸ್ತೆ ಅಭಿವೃದ್ಧಿ, ಪಡಿತರ ಚೀಟಿ, ಮನೆಗಳು ಬೇಕು ಎಂದು ಇನ್ನೂ ಹಲವಾರು ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ಕೊಟ್ಟಿದ್ದೀರಿ. ಈ ಎಲ್ಲ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ಪರಿಹರಿಸಿಕೊಡುವುದಾಗಿ ತಿಳಿಸಿದರು.
ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖ್ಯಮಂತ್ರಿಗಳ ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net