ಸರ್ಕಾರಿ ಶಾಲೆ ಕಟ್ಟಡಗಳ ಅಭಿವೃದ್ಧಿಗೆ ಕ್ರಮ

SRP_22-01jpg
ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭೂಮಿ ಪೂಜೆ ನೆರವೇರಿಸಿದರು.
Published on

ಶ್ರೀರಂಗಪಟ್ಟಣ: ತಾಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಕಟ್ಟಡಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಜತೆಗೆ ಗ್ರಾಮೀಣ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ತಾಲೂಕಿನ ಹಂಗರಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ನವೀಕರಣಗೊಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಹಾಗೂ ನೂತನ ಶ್ರೀರಾಮ ದೇವಾಲಯದ ಉದ್ಘಾಟನೆ ಜತೆಗೆ ಗ್ರಾಮದಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲೆ ಕಟ್ಟಡಗಳನ್ನು ದುರಸ್ತಿಗೊಳಿಸಿ ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನ ಓಟಕ್ಕೆ ಬೇಕಾದ ಕಲಿಕೆಗೆ ಶಿಕ್ಷಕರಿಂದ ಒತ್ತು ನೀಡಲಾಗುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ತರಲಾಗುತ್ತಿದೆ ಎಂದರು.

ಹಂಗರಹಳ್ಳಿ ಗ್ರಾಮದಲ್ಲೂ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಇಂಜಿನಿಯರ್ ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನೀಡಲಿ ಎಂದು ಸೂಚಿಸಿದರು.

ಮುಂಡುಗದೊರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ನಾಗರಾಜು, ಸದಸ್ಯೆ ಮಹಾಲಕ್ಷ್ಮೀ, ಗ್ರಾಮದ ಹಿರಿಯ ತಿಮ್ಮಣ್ಣ, ಮುಖಂಡ ಚೌಡಪ್ಪ, ಗುತ್ತಬಸವರಾಜು, ಗೋವಿಂದೇಗೌಡ, ಹನುಮಂತು, ಪಾರ್ಥನಾರಾಯಣಗೌಡ, ಹೋಬಳಿ ನಾಗರಾಜಣ್ಣ, ಶಿವಯ್ಯ, ಈರೇಗೌಡ, ಚಿಕ್ಕಪಾಳ್ಯ ಚಂದ್ರು, ಶಾಲಾಪ್ರಾಂಶುಪಾಲೆ ವಾಣಿಶ್ರೀ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net