ಜವಾಹರ ನವೋದಯ ಶಾಲೆ ಅಭಿವೃದ್ಧಿಗೆ ಕ್ರಮ

NAVODAYA
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪದಲ್ಲಿರುವ ಜವಾಹರ ನವೋದಯ ವಿದ್ಯಾಲಯದ ಆವರಣದಲ್ಲಿ ಗುರುವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಚಾಲನೆ ನೀಡಿದರು. ಬಸವರಾಜ, ರುದ್ರಗೌಡ ಪಾಟೀಲ, ಎಸ್.ಆರ್.ಚಿಗರಿ ಇತರರಿದ್ದರು.
Published on

ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಸಮೀಪದಲ್ಲಿ ಜವಾಹರ ನವೋದಯ ವಿದ್ಯಾಲಯದಲ್ಲಿ ಗುರುವಾರ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರ ನೇತೃತ್ವದಲ್ಲಿ ವಿದ್ಯಾಲಯದ ಆಡಳಿತ ಮಂಡಳಿಯ ಸಭೆ ಜರುಗಿತು.

ವಿದ್ಯಾಲಯದ ಆವರಣದಲ್ಲಿ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಆಟದ ಮೈದಾನ, ಬಿಸಿ ನೀರಿನ ವ್ಯವಸ್ಥೆ ಇತ್ಯಾದಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಪ್ರಭಾರಿ ಪ್ರಾಂಶುಪಾಲ ಬಸವರಾಜ ಮಾತನಾಡಿ ವಿದ್ಯಾಲಯದಲ್ಲಿ ಪೂರ್ಣಗೊಂಡ ಅಭಿವೃಧ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ವಿದ್ಯಾಲಯದ ಶೈಕ್ಷಣಿಕ ಪ್ರಗತಿ ಮತ್ತು ಕಟ್ಟಡಗಳ ಅಭಿವೃದ್ಧಿ ಕೆಲಸಗಳಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಅನುದಾನ ಪೂರೈಸುವ ಬಗ್ಗೆ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಸಭೆಯ ನಂತರ ವಿದ್ಯಾಲಯದ ಆವರಣದಲ್ಲಿ ಸಸಿ ನೆಡಲಾಯಿತು. ಹೊಸದಾಗಿ ನಿರ್ಮಿಸಲಾದ ಕ್ರಿಕೆಕ್ ಪ್ರಾಕ್ಟಿಸ್ ನೆಟ್ ಅನ್ನು ಉದ್ಘಾಟಿಸಲಾಯಿತು. ವಿದ್ಯಾಲಯದ ಮಕ್ಕಳು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಡಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಇಒ ಎಚ್.ಎಂ. ಫಡ್ನೇಶಿ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್.ಆರ್. ಚಿಗರಿ, ಪಿಡಬ್ಲುೃಡಿ ಎಇಇ ಎಂ.ಎಸ್. ಪಾಟೀಲ, ರುದ್ರಗೌಡ ಪಾಟೀಲ ಮತ್ತು ಪಾಲಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ಶಿಕ್ಷಕ ವಿಜಯಕೃಷ್ಣ ಆನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net