ಜಾಗತಿಕ ಗುಣಮಟ್ಟದ ಕ್ರೀಡಾಂಗಣಕ್ಕೆ ಕ್ರಮ

9 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋ ಲಾಡ್ ಹೇಳಿದರು.
ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಕ್ರೀಡಾಂಗಣವನ್ನು ಮಂಗಳವಾರ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಏಷ್ಯ ಖಂಡದಲ್ಲೇ ಅತ್ಯಂತ ದೊಡ್ಡದಾದ ಮತ್ತು ನೈಸರ್ಗಿಕವಾಗಿರುವ ಕ್ರೀಡಾಂಗಣ ನಿರ್ಮಿಸಲು 1996ರಲ್ಲೇ ಕಾಮಗಾರಿ ಆರಂಭಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಮತ್ತೆ ಕಾಮಗಾರಿ ಆರಂಭಿಸಲಾಗುವುದು ಎಂದರು.
ಮುಂದಿನ ಒಂದು ವಾರದಲ್ಲಿ ಜೆಸಿಬಿ ಮೂಲಕ ಕ್ರೀಡಾಂಗಣ ಸ್ವಚ್ಛತೆ ನಡೆಸಲಾಗುವುದು. ಕ್ರೀಡಾಂಗಣ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗುವುದು. ಬಹು ವಿದಧ ಕ್ರೀಡೆಗಳನ್ನು ಆಡಲು ಅನುಕೂಲವಾಗುವಂತೆ ಕ್ರೀಡಾಂಗಣ ರೂಪಿಸಲಾಗುವುದು. ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ, ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ವೈ. ಮಟ್ಟಿಹಾಳ, ಕ್ರೀಡಾ ವಿಭಾಗದ ಮಖ್ಯಸ್ಥ ಡಾ. ಬಿ.ಎಂ. ಪಾಟೀಲ, ಪಾಲಿಕೆ ಸದಸ್ಯ ಡಾ. ಮಯೂರ ಮೋರೆ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net