ಪರಿಹಾರಧನ ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಕ್ರಮ

Santosh Lad 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರೈತರು, ಕುಶಲಕರ್ಮಿಗಳು, ಉದ್ಯೋಗಿಗಳು ಕೆಲವೊಮ್ಮೆ ಪಡೆದ ಬ್ಯಾಂಕ್ ಸಾಲವನ್ನು ನಿಗದಿತ ಅವಽಗೆ ಮರುಪಾವತಿ ಸಾಧ್ಯವಾಗುವುದಿಲ್ಲ. ಬ್ಯಾಂಕ್‌ಗಳು ರೈತರು ಅಥವಾ ಸುಸ್ಥಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೋರಿ ಕಾಲಾವಕಾಶ ನೀಡಬೇಕು. ಸರ್ಕಾರದಿಂದ ಪಾವತಿಯಾಗುವ ಪಿಂಚಣಿ, ಪರಿಹಾರ, ಸಹಾಯಧನವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದರು.

ನಗರದ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಜನರ ಜೀವ ಮುಖ್ಯ. ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೀರಿ ವರ್ತಿಸಬಾರದು. ರೈತ ಆತ್ಮಹತ್ಯೆಗಳು ಏಕೆ ಘಟಿಸುತ್ತಿವೆ ಎಂಬುದರ ಕುರಿತು ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ, ಬ್ಯಾಂಕ್ ಅಽಕಾರಿ ಹಾಗೂ ಕೃಷಿ- ಸಾಮಾಜಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದರು.

ಕು0ದಗೋಳ ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಬ್ಯಾಂಕ್ ಸಿಬ್ಬಂದಿ ರೈತರ ಮನೆಗಳಿಗೆ ಭೇಟಿ ನೀಡಿ ತಕ್ಷಣ ಸಾಲ ಮರುಪಾವತಿಸಲು ಒತ್ತಾಯಿಸುತ್ತಿದ್ದಾರೆ ಎಂದು ರೈತರು ದೂರು ನೀಡುತ್ತಿದ್ದಾರೆ. ಬೆಳೆ ಸಮೀಕ್ಷೆ ಮಾಡುವಾಗ ನಿಯಮಗಳನ್ನು ಪಾಲಿಸಬೇಕು. ರೈತರ ಗೊಂದಲಗಳಿಗೆ ಸಂಬ0ಧಪಟ್ಟಿ ಇಲಾಖೆಯ ಅಧಿಕಾರಿಗಳು ತಿಳಿವಳಿಕೆ ನೀಡಬೇಕು ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಬ್ಯಾಂಕ್ ಸೌಲಭ್ಯಗಳ ಕುರಿತು ಗ್ರಾಮಸಭೆ ಹಾಗೂ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕೃಷಿ ಹಾಗೂ ಸಂಬ0ಧಿತ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರದ ಪರಿಹಾರಧನವನ್ನು ರೈತರ ಸಾಲಕ್ಕೆ ಹೊಂದಾಣಿಕೆ ಮಾಡದಂತೆ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿ.ಪಂ. ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ. ಬ್ಯಾಕೋಡ ವೇದಿಕೆಯಲ್ಲಿದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ ಗಡಾದ, ತಹಸೀಲ್ದಾರರು, ವಿವಿಧ ಬ್ಯಾಂಕ್‌ಗಳ ಪ್ರತಿನಿಽಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ, ತಾಲೂಕು ಮಟ್ಟದ ಅಽಕಾರಿಗಳಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net