ಐದಕ್ಕಿಂತ ಹೆಚ್ಚು ಜನ ಸೇರಿದರೆ ಕ್ರಮ

Chandra guptha
Published on

ಮೈಸೂರು: ನಗರದಲ್ಲಿ ಮೇ 31ರವರೆಗೆ ನಿಷೇಧಾಜ್ಞೆ ಮುಂದುವರಿದಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಗತ್ಯ ಸೇವೆ ಹೊರತುಪಡಿಸಿ 5ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ.

ಬೆಳಗ್ಗೆ 7ರಿಂದ ಸಂಜೆ 7ರವರೆಗೆ ವ್ಯಾಪಾರ ಮಳಿಗೆ ತೆರೆಯಲು ಅವಕಾಶವಿದ್ದು, ಪ್ರತಿ ಗ್ರಾಹಕರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ಮಳಿಗೆದಾರರು ನಿಗಾ ವಹಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಎಚ್ಚರಿಸಿದ್ದಾರೆ.

ಸಾರ್ವಜನಿಕ ಸ್ಥಳಗಳು, ವ್ಯಾಪಾರ ಮಳಿಗೆಗಳಿಗೆ ಬರುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಇಲ್ಲವಾದಲ್ಲಿ ಗ್ರಾಹಕರಿಗೆ ಮಳಿಗೆದಾರರು ಕಡ್ಡಾಯವಾಗಿ ಸೇವೆಯನ್ನು ನಿರಾಕರಿಸಬೇಕು.

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ವೈದ್ಯಕೀಯ ಮತ್ತು ಅಗತ್ಯ ಸೇವೆಗಳಿಗೆ ಹೊರತುಪಡಿಸಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದು. ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಅನಿವಾರ್ಯ.

ಲಾಕ್‌ಡೌನ್ ಅವಧಿಯ ಪ್ರತಿ ಭಾನುವಾರ ಸಾರ್ವಜನಿಕರ ಸಂಚಾರ, ವ್ಯಾಪಾರ ವಹಿವಾಟುವನ್ನು ನಿಷೇಧಿಸಲಾಗಿದೆ. ಕೆಲಸ ಮಾಡುವ ಸ್ಥಳ, ಕಚೇರಿಯಲ್ಲಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಶುಚಿತ್ವವನ್ನು ಕಾಪಾಡಬೇಕು. ಕರೊನಾ ಸೋಂಕು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net