ಹಳೇ ಪಿಂಚಣಿ ಯೋಜನೆಗೆ ಕ್ರಮಕೈಗೊಳ್ಳಬೇಕು: ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಆಗ್ರಹ

mysore
Published on

ಗಂಗೊಳ್ಳಿ: ಸಮಾನ ಕೆಲಸ ಸಮಾನ ವೇತನ ಎನ್ನುವ ಸಂವಿಧಾನಬದ್ಧ ಹಕ್ಕು ಸದ್ಯ ರಾಜ್ಯದಲ್ಲಿ ಪುಸ್ತಕಕ್ಕೆ ಸೀಮಿತವಾಗಿದ್ದು, ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ತಕ್ಷಣ ಹಳೇ ಪಿಂಚಣಿ ಯೋಜನೆ(ಒಪಿಎಸ್)ಗೆ ವರ್ಗಾಯಿಸಿ ಕ್ರಮಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಆಗ್ರಹಿಸಿದರು.

ಶಿಕ್ಷಣ ಇಲಾಖೆಯಲ್ಲಿ ಭಡ್ತಿ ಹಾಗೂ ಪಿಂಚಣಿ ವ್ಯವಸ್ಥೆ ಮಾತ್ರವಲ್ಲದೆ ಸಂಬಳದಲ್ಲೂ ಕೂಡ ತಾರತಮ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ 40 ವರ್ಷಗಳಿಂದ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ನೌಕರರು ಪಿಂಚಣಿಯಿಂದ ವಂಚಿತರಾಗಿದ್ದಾರೆ. ಪಿಂಚಣಿ ಸಂವಿಧಾನಬದ್ಧ ಹಕ್ಕು ಎನ್ನುವುದನ್ನು ಸುಪ್ರಿಂಕೋರ್ಟ್ ಈಗಾಗಲೇ ಅನೇಕ ಆದೇಶಗಳ ಮೂಲಕ ವ್ಯಾಖ್ಯಾನಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವೋಟ್ ಫಾರ್ ಎನ್‌ಪಿಎಸ್ ಎನ್ನುವ ಪ್ರಣಾಳಿಕೆ ಮೂಲಕ ಮತ ಪಡೆದು ಅಭೂತಪೂರ್ವ 135 ಸ್ಥಾನಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಓಪಿಎಸ್ ಪದ್ಧತಿ ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಕುಂದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜೆಡಿಎಸ್ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಾಧ್ಯಕ್ಷ ಹುಸೇನ್ ಹೈಕಾಡಿ, ಪಕ್ಷದ ಮುಖಂಡರು, ವಿವಿಧ ಶಿಕ್ಷಕರ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net