

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಪರವಾಗಿ ಕಳೆದ ಸಚಿವ ಸಂಪುಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದೆರಡು ವರ್ಷದ ಹೋರಾಟವಲ್ಲ. ಕಳೆದ 40 ವರ್ಷಗಳಿಂದಲೂ ಇದೇ ಸಮಸ್ಯೆ ಇದೆ. ಶಿವಮೊಗ್ಗದಲ್ಲಿ ಸಮಸ್ಯೆ ಬಗೆಹರಿದರೆ ಬಹುತೇಕ ಇಡೀ ರಾಜ್ಯದಲ್ಲಿ ಭೂ ಹಕ್ಕಿನ ಸಮಸ್ಯೆಗೆ ಮುಕ್ತಿ ಸಿಗಲಿದೆ. ಅದಕ್ಕಾಗಿ ಚಳಿಗಾಲದ ಅಧಿವೇಶನ ಆರಂಭವಾಗುವ ಮುನ್ನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ಜತೆ ಕುಳಿತು ಚರ್ಚೆ ಮಾಡಿದ್ದೇನೆ. ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಅವರಿಗೆ ವಕೀಲರನ್ನೂ ನೇಮಿಸಲಾಗುತ್ತಿದೆ. ಪಕ್ಷಾತೀತವಾಗಿ ಕೆಲಸವಾಗುತ್ತಿದೆ. ರಾಜ್ಯ ಸರ್ಕಾರದ ಸಮಸ್ಯೆಯನ್ನು ನಾವು ಬಗೆಹರಿಸುತ್ತೇವೆ. ಕೇಂದ್ರ ಸರ್ಕಾರದ ಸಮಸ್ಯೆಯನ್ನು ಬಿಜೆಪಿಯವರು ಬಗೆಹರಿಸಬೇಕಿದೆ ಎಂದರು.