ಸ್ವಾತಂತ್ರೊೃೀತ್ಸವ ಕಾರ್ಯಕ್ರಮಕ್ಕೆ ಗೈರಾದರೆ ಕ್ರಮ

4spt4-
ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಆ.15ರಂದು ನಡೆಯುವ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಪರಮೇಶ್ ಕುಮಾರ್, ಭಾಗ್ಯಮ್ಮ ಇದ್ದರು.
Published on

ಸೋಮವಾರಪೇಟೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಹವಾಮಾನ ವರದಿ ನೋಡಿಕೊಂಡು ಸ್ವಾತಂತ್ರೃ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸಲಾಗುವುದು. ವಿವಿಧ ಇಲಾಖೆಯವರು ತಮಗೆ ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಅಲ್ಲದೆ ಪ್ರತಿಯೊಬ್ಬ ಇಲಾಖಾಧಿಕಾರಿಯೂ ಕಾರ್ಯಕ್ರಮದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಮಳೆ ಇಲ್ಲದಿದ್ದರೆ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಮಳೆ ಇದ್ದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರಿನ ವೇದಿಕೆಯಲ್ಲಿ ನಡೆಸಲಾಗುತ್ತದೆ. ವಾಟರ್ ಪ್ರೂಫ್ ಶಾಮಿಯಾನ ಹಾಕಿಸಲಾಗುವುದು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದ ನಂತರ, ಜೂನಿಯರ್ ಕಾಲೇಜಿನ ಆವರಣದಲ್ಲಿ 9.30ಕ್ಕೆ ಸಮಿತಿ ವತಿಯಿಂದ ಧ್ವಜಾರೋಹಣ ನೆರವೇರಿಸಲಾಗುವುದು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯು ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳು, ಸಾರ್ವಜನಿಕ ಸೇವೆಯ ಸಾಧಕರು, ವಿವಿಧ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಪರಮೇಶ ಕುಮಾರ್, ಬಿಇಒ ಭಾಗ್ಯಮ್ಮ, ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು, ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net