ಕಾಲುವೆಗೆ ನೀರು ಹರಿಸಲು ಕ್ರಮ : ಸಚಿವ ಡಾ.ಎಚ್.ಸಿ. ಮಹದೇವಪ್ಪ

Mahadevappa
Published on

ಮೈಸೂರು: ಕಬಿನಿ ಜಲಾಶಯದಿಂದ ಈಗಾಗಲೇ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ಕೆಆರ್‌ಎಸ್ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ ಸಭೆ ಏರ್ಪಡಿಸಲಾಗುವುದು. ಈ ವಿಚಾರದಲ್ಲಿ ವಿಳಂಬ ತೋರದೆ ಆದಷ್ಟು ಬೇಗ ನೀರು ಹರಿಸಲು ಕ್ರಮ ವಹಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net