ಅಂಗವಿಕಲರ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಕ್ರಮ

bommayi
Published on

ಉಡುಪಿ: ಅಂಗವಿಕಲರ ಕಾರ್ಯಕ್ರಮಗಳಿಗೆ ಇನ್ನಷ್ಟು ಶಕ್ತಿ ಕೊಡುವ ಕೆಲಸ ಸರ್ಕಾರ ಮಾಡುತ್ತಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಂಗವಿಕಲರ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಜರುಗಿದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲರಿಗೆ ಅನುಕೂಲವಾಗುವಂತೆ ಸರ್ಕಾರದ ವತಿಯಿಂದ ಹಲವು ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಲಾಗುವುದು. ಈ ನಿಟ್ಟಿನಲ್ಲಿ ಇಲಾಖೆಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು. ಅಂಗವಿಕಲ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು. ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷೃ ಮಾಡುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net