

ಸೇಡಂ: ಮಕ್ಕಳನ್ನು ಸರಿದಾರಿಗೆ ತರುವ ಸಾಮರ್ಥ್ಯ ಗುರುಗಳು ಹೊಂದಿದ್ದು, ಶಿಕ್ಷಕರಿಂದ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲï ಹೇಳಿದರು.
ವಾಸವಿ ಕಲ್ಯಾಣ ಮಂಟಪದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದಿಂದ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಖಾಲಿ ಇರುವ ಸುಮಾರು 13 ಸಾವಿರ ಶಿಕ್ಷಕರ ಹುದ್ದಗಳನ್ನು ತುಂಬುವ ನಿಟ್ಟಿನಲ್ಲಿ ಚಿಂತನೆ ಆರಂಭಿಸಲಾಗಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಾಲ್ಕು ಸಾವಿರ ಶಿಕ್ಷಕರ ಹುದ್ದೆಗಳು ಭರ್ತಿಯಾಗಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಶಕ್ತಿ ಬರಲಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಸರ್ಕಾರ 5 ಸಾವಿರ ಕೋಟಿ ರೂ. ಅನುದಾನ ನೀಡಲಿದ್ದು, ಇದರಲ್ಲಿ ಶೇ.25 ಶಿಕ್ಷಣ ರಂಗಕ್ಕೆ ಬಳಸಿಕೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಸಹಾಯಕ ಆಯುಕ್ತರು, ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಒಂದೊAದು ಪ್ರೌಢಶಾಲೆಯ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು. ಈ ಮೂಲಕ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸುಧಾರಣೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಕೊತ್ತಲ ಬಸವೇಶ್ವರ ದೇವಾಲಯದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿ, ತಾಲೂಕಿನಲ್ಲಿ ಶೈP್ಷÀಣಿಕ ವಾತಾವರಣ ಉತ್ತಮವಾಗಿದೆ. ಇದರೊಟ್ಟಿಗೆ ಪಲಿತಾಂಶ ಸುಧಾರಣೆಗೆ ಸಚಿವರು ಕೆಲವೊಂದು ಸಲಹೆ ನೀಡಿದ್ದು, ಅದು ಅಳವಡಿಸಿಕೊಂಡಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲು ಸಾಧ್ಯ. ತಾಲೂಕಿನಲ್ಲಿ ಪಾಲಿಟೆಕ್ನಿಕ್ ಕಾಲೇಜು ಆರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ತಹಸೀಲ್ದಾರ್ ಶ್ರೀಯಾಂಕ ಧನಶ್ರೀ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಇಮಡಾಪುರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಸಾಗರ ಮಾತನಾಡಿದರು.
ತೋಟಗಾರಿಕೆ ಮಹಾಮಂಡಳಿ ನಿರ್ದೇಶಕ ಬಸವರಾಜ ಪಾಟೀಲ್ ಊಡಗಿ, ತಾಪಂ ಇಒ ಚನ್ನಪ್ಪ ರಾಯಣ್ಣನವರ್, ಪುರಸಭೆ ಮುಖ್ಯಾಧಿಕಾರಿ ಪ್ರಹ್ಲಾದ್, ಪ್ರಮುಖರಾದ ಅಶೋಕರೆಡ್ಡಿ ಚಿಲುಮೆ, ಅನೀಲಕುಮಾರ ಸುಬೇದಾರ, ಸಂತೋಷ ಕುಲಕರ್ಣಿ, ಸಕ್ರೇಪ್ಪ ಹಂದರಕಿ, ಶಂಕರಲಿAಗಪ್ಪ, ಉಮಾಪತಿರಾಜು ಇತರರಿದ್ದರು.
ನಿವೃತ್ತ, ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಾತೃಛಾಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕ್ಷೇತ್ರ ಶಿP್ಷÀಣಾಧಿಕಾರಿ ಮಾರುತಿ ಹುಜರತಿ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿP್ಷÀಣಾಧಿಕಾರಿ ಮುನಾಫ್ ಪಟೇಲ್ ಸ್ವಾಗತಿಸಿದರು.
(ಕೋಟ್)
ತಾಲೂಕಿನಲ್ಲಿ ಹೊಸ ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜು ಆರಂಭಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದ್ದು, ಇದಕ್ಕಾಗಿ ಸಂಬAಧಿಸಿದ ಇಲಾಖೆಯೊಂದಿಗೆ ಚರ್ಚೆ ಮಾಡಲಾಗುತ್ತದೆ. ಸೇಡಂ ಶೈP್ಷÀಣಿಕ ಜಿ¯್ಲÉಯಾಗಬೇಕು ಎನ್ನುವುದು ಎಲ್ಲರ ಆಸೆ, ಆದರೆ ಅದಕ್ಕೆ ಯಾವೆಲ್ಲ ಪೂರಕ ವಾತಾವರಣ ಅಗತ್ಯ ಎನ್ನುವುದನ್ನು ನೋಡಬೇಕಾಗುತ್ತದೆ.
| ಡಾ.ಶರಣಪ್ರಕಾಶ ಪಾಟೀಲ್, ಸಚಿವ