

ರಾವಂದೂರು: ಹಿಟ್ನೆ ಹೆಬ್ಬಾಗಿಲು ಗ್ರಾಮದ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ರಾವಂದೂರು ಹೋಬಳಿಯ ಹಿಟ್ನೆ ಹೆಬ್ಬಾಗಿಲು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಮೊದಲ ಅಂತಸ್ತಿನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಹಿಳೆಯರು ಹೈನುಗಾರಿಕೆಯನ್ನು ಹೆಚ್ಚು ಅವಲಂಬಿಸಿದ್ದು, ಇದರಿಂದ ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆಯ ನೆಮ್ಮದಿ ಜೀವನಕ್ಕೆ ಹೈನುಗಾರಿಕೆ ತುಂಬಾ ಸಹಕಾರಿಯಾಗಿದೆ ಹಾಗೂ ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮದ ಜನರ ಸಮಸ್ಯೆಗಳನ್ನು ಹಂತ, ಹಂತವಾಗಿ ಬಗೆಹರಿಸುವ ಮೂಲಕ ಮಾದರಿ ಗ್ರಾಮವನ್ನಾಗಿ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಹಾಗೂ ಇದರ ಜತೆಗೆ ಗ್ರಾಮ ಪಂಚಾಯಿತಿಗಳು ಸಹ ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ಸ್ಥಿತಿಯಲ್ಲಿದ್ದು, ಗುಣಮಟ್ಟದ ಹಾಲನ್ನು ಪೂರೈಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಗ್ರಾಪಂ ಅಧ್ಯಕ್ಷ ಶ್ರೀ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಯತನಹಳ್ಳಿ ಮಹದೇವ್, ಸಂಘದ ಅಧ್ಯಕ್ಷ ಎಚ್.ಡಿ.ಮಹಾದೇವ್, ಉಪಾಧ್ಯಕ್ಷ ಶಶಿಕುಮಾರ್, ಗ್ರಾಪಂ ಉಪಾಧ್ಯಕ್ಷೆ ಯಶೋದಮ್ಮ, ಮುಖಂಡರಾದ ಹಿಟ್ನಹಳ್ಳಿ ಪರಮೇಶ್, ಅಮೃತ್, ಯೋಗೇಶ್, ತಾಲೂಕು ದಂಡಾಧಿಕಾರಿ ನಿಸರ್ಗಪ್ರಿಯ, ಇಒ ಸುನಿಲ್, ಡಾ.ಸತೀಶ್, ಹಿತೇಂದ್ರ, ನಿಶ್ಚಿತ್, ಶ್ರೀಕಾಂತ್ ಇದ್ದರು.