ಸಮಸ್ಯೆ ಬಗೆಹರಿಸಲು ಕ್ರಮ

ಸಮಸ್ಯೆ ಬಗೆಹರಿಸಲು ಕ್ರಮ
Published on

ಬೆಟ್ಟದಪುರ: ಬೆಟ್ಟದಪುರ ಸಮೀಪದ ಹಸುವಿನಕಾವಲು ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.

ಈಗಾಗಲೇ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ಇಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಚಿಕ್ಕನೇರಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ತಹಸೀಲ್ದಾರ್ ಕುಂಞ ಅಹಮದ್, ತಾಲೂಕು ಪಂಚಾಯಿತಿ ಇಒ ಸುನೀಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net