ಫುಡ್ ಸ್ಟ್ರೀಟ್ ಆರಂಭಕ್ಕೆ ಕ್ರಮ

Oplus_131072
ನಂಜನಗೂಡು ನಗರದ ನಗರಸಭೆ ಕಚೇರಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಯಿತು. ಶ್ರೀಕಂಠಸ್ವಾಮಿ, ವಿಜಯ್, ಅಧಿಕಾರಿಗಳು ಹಾಜರಿದ್ದರು.
Published on

ನಂಜನಗೂಡು: ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಅಧ್ಯಕ್ಷತೆಯಲ್ಲಿ ಬೀದಿಬದಿ ವ್ಯಾಪಾರಿಗಳು ಮತ್ತು ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.

ನಗರಸಭಾ ಆಯುಕ್ತ ವಿಜಯ್ ಮಾತನಾಡಿ, ಮೈಸೂರು ಮತ್ತು ಬೆಂಗಳೂರು ಮಾದರಿಯಲ್ಲಿ ನಂಜನಗೂಡು ನಗರದಲ್ಲಿ ಫುಡ್ ಸ್ಟ್ರೀಟ್ ಆರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಂಜನಗೂಡಿನ ರಾಷ್ಟ್ರಿಪತಿ ರಸ್ತೆಯ ಜೀರೋ ಕ್ರಾಸ್‌ನಿಂದ ನ್ಯಾಯಾಲಯದವರೆಗೆ ಟ್ರಾಫಿಕ್ ಜಾಮ್ ಕಂಡುಬರುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೀದಿಬದಿ ವ್ಯಾಪಾರಿಗಳಿಂದ ಪಾದಚಾರಿಗಳು, ವಾಹನ ಸವಾರರಿಗೆ ಓಡಾಡಲು ತೊಂದರೆಯಾಗುತ್ತಿದೆ. ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಲು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಗೋವಿಂದರಾಜು, ನಗರಸಭೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಬೀದಿಬದಿ ವ್ಯಾಪಾರಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net