ಯೂನಿಯನ್ ಸದೃಢಗೊಳಿಸಲು ಕ್ರಮ

02 SDPR (1)
Published on


ಸಿದ್ದಾಪುರ: ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇಲ್ಲಿನ ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ಗುರುವಾರ ಜರುಗಿತು.

ನೂತನ ಅಧ್ಯಕ್ಷ ವಿ.ಕೆ ಲೋಕೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಮಾಜಿ ಉಪಾಧ್ಯಕ್ಷ ಎನ್.ಕೆ ರಾಜೇಂದ್ರ ಬಾಬು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ವಿ.ಕೆ ಲೋಕೇಶ್, ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿದೆ. ಈ ಹಿಂದಿನ ಆಡಳಿತ ಮಂಡಳಿಯ ಕೆಲವು ಎಡವಿಟ್ಟುಗಳಿಂದಾಗಿ ಸಮಸ್ಯೆ ಉಂಟಾಗಿದೆ. ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಅಧೀನದಲ್ಲಿ ಸಿದ್ದಾಪುರದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅದರ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ಉತ್ತಮಗೊಳಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.

ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಉಪಾಧ್ಯಕ್ಷ ಆರ್. ರಾಜನ್, ಕಾರ್ಯದರ್ಶಿ ಎಂ.ಪಿ. ಶಿವದಾಸ್, ನಿರ್ದೇಶಕ ಎಂ.ಎಂ ಶಂಕರನಾರಾಯಣ, ಕೆ.ಎನ್. ಮೋಹನ್‌ದಾಸ್, ಪಂಚಾಯಿತಿ ಸದಸ್ಯರಾದ ಸಿ.ವಿ. ನಾರಾಯಣನ್, ಪಿ.ಆರ್. ದಾಮೋದರ್, ಟಿ.ಸಿ. ನಾರಾಯಣನ್, ನಿಕಟಪೂರ್ವ ಅಧ್ಯಕ್ಷ ಕೆ.ಜಿ. ಬಾಲಕೃಷ್ಣ, ವಿವಿಧ ಮಲಯಾಳಿ ಸಂಘಟನೆಗಳ ಅಧ್ಯಕ್ಷರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net